
ಇಟಾನಗರ (ಫೆ. 22): ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ, 23 ವರ್ಷಗಳ ಕಾಲ ಅರುಣಾಚಲಪ್ರದೇಶ ಮುಖ್ಯಮಂತ್ರಿಯಾಗಿದ್ದ ಗೆಗಾಂಗ್ ಅಪಾಂಗ್ ಅವರು ಎಚ್.ಡಿ. ದೇವೇಗೌಡ ನೇತೃತ್ವದ ಜೆಡಿಎಸ್‌ಗೆ ಗುರುವಾರ ಸೇರ್ಪಡೆಯಾಗಿದ್ದಾರೆ.
ಪೂರ್ವ ಸಿಯಾಂಗ್ ಜಿಲ್ಲೆಯ ಪಾಸಿಘಾಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವೇಗೌಡರ ಸಮ್ಮುಖ ಅಪಾಂಗ್ ಜೆಡಿಎಸ್‌ಗೆ ಸೇರ್ಪಡೆಯಾದರು. ಜೆಡಿಎಸ್‌ಗೆ ಜಾತ್ಯತೀತ ನೋಟ ಇದೆ. ಹೀಗಾಗಿ ಜತೆಯಾಗಿರಲು ನಿರ್ಧರಿಸಿದ್ದೇನೆ ಎಂದು ಅಪಾಂಗ್ ಸುದ್ದಿಗಾರರಿಗೆ ತಿಳಿಸಿದರು.
7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಪಾಂಗ್ ಅವರು ಜ.15ರಂದು ಬಿಜೆಪಿ ತೊರೆದಿದ್ದರು. ಜ.19 ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಮಮತಾ ಬ್ಯಾನರ್ಜಿ ರಾರಯಲಿಯಲ್ಲೂ ಕಾಣಿಸಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.