
ಬೆಂಗಳೂರು, (ಸೆ.14): ಹಲವು ವರ್ಷಗಳ ರಾಜಕೀಯ ತೊಳಲಾಟಗಳಿಂದ ಬಳಲಿರೋ ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶದಲ್ಲಿ ಫುಲ್ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.
ಯುರೋಪ್ ಪ್ರವಾಸದಲ್ಲಿರುವ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಲಂಡನ್ನ ಥೇಮ್ಸ್ ನದಿ ದಡದಲ್ಲಿ ವಾಯುವಿಹಾರ ಮಾಡಿ ರಿಫ್ರೇಶ್ ಆಗಿದ್ದಾರೆ. ಹಾಗೂ ಲಂಡನ್ನ ಜೇಮ್ಸ್ ಪಾರ್ಕ್ನಲ್ಲಿರೋ ಬಸವಣ್ಣನ ಪುತ್ಥಳಿ ಎದುರು ಸಿದ್ದು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಆದರೆ, ಸಿದ್ದರಾಮಯ್ಯ ವಿದೇಶ ಪ್ರವಾಸಕ್ಕೆ ತೆರಳಿದ ದಿನದಿಂದ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯನವರ ಪಾಳಯದಲ್ಲಿ ಗುರುತಿಸಿಕೊಂಡಿರುವ ನಾಯಕರುಗಳೇ ಸಮ್ಮಿಶ್ರ ಸರ್ಕಾರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದು, ಸರ್ಕಾರ ಅಲುಗಾಡುತ್ತಿದೆ. ಇದ್ರಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಿದ್ದು ಮೇಲೆ ಗರಂ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.