
ಹಾಸನ, [ಅ.10]: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎ. ಮಂಜು ಅವರು ಮಾಜಿ ಪ್ರದಾನಿ ದೇವೇಗೌಡ ಕುಟುಂಬದ ವಿರುದ್ಧ ಸಿಡಿದೆದ್ದಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧೆಡೆ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಮ್ಮ ಪ್ರಭಾವ ಬಳಿಸಿ, 69 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಎ.ಮಂಜು ಗಂಭೀರ ಆರೋಪ ಮಾಡಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ತಮ್ಮ ಅಣ್ಣನನ್ನು ರಕ್ಷಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಂತಿದ್ದಾರೆ. ಭೂ ಕಬಳಿಕೆ ಆರೋಪ ನಿರಾಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೇವಣ್ಣ ವಿರುದ್ದ ಮೂರು ದಿನಗಳಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ‍್ಳದಿದ್ದರೆ ಕಾನೂನು ಸಮರ ಸಾರುವುದಾಗಿ ಎ.ಮಂಜು ಎಚ್ಚರಿಸಿದ್ದಾರೆ. ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್ ಹಾಗೂ ತಾಯಿ ಹೆಸರಿಗೆ ಜಮೀನು ವರ್ಗಾವಣೆ ಮಾಡಿರುವ ದಾಖಲೆಗಳನ್ನು ಬಿಡುಗಡೆಗೊಳಿಸಲಾಗಿದೆ.
ಭೂ ಕಬಳಿಕೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವ ಪ್ರಶ್ನೇಯೇ ಇಲ್ಲ ಎಂದು ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.