ಸಿಎಂ ಎದುರಿಗೆ ಚುನಾವಣಾ ನಿವೃತ್ತಿ ಘೋಷಿಸಿದ ಮಾಜಿ ಸಚಿವ : ಇವರನ್ನು ಇತ್ತೀಚಿಗಷ್ಟೆ ಸಂಪುಟದಿಂದ ಕೈ ಬಿಡಲಾಗಿತ್ತು

Published : Oct 09, 2016, 03:52 PM ISTUpdated : Apr 11, 2018, 01:12 PM IST
ಸಿಎಂ ಎದುರಿಗೆ ಚುನಾವಣಾ ನಿವೃತ್ತಿ ಘೋಷಿಸಿದ ಮಾಜಿ ಸಚಿವ : ಇವರನ್ನು ಇತ್ತೀಚಿಗಷ್ಟೆ ಸಂಪುಟದಿಂದ ಕೈ ಬಿಡಲಾಗಿತ್ತು

ಸಾರಾಂಶ

ಇದಕ್ಕೆ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್'ಗೆ ಅವಕಾಶ ನೀಡಲು ಚುನಾವಣಾ ನಿವೃತ್ತಿ ಘೋಷಿಸಿದ್ದೇನೆ ಎಂದಿದ್ದಾರೆ.

ಮಂಗಳೂರು(ಅ.9): ಮಾಜಿ ಸಚಿವರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿನಲ್ಲಿಯೇ ಚುನಾವಣಾ  ನಿವೃತ್ತಿ ಘೋಷಿಸಿದ್ದಾರೆ. ಇವರು ಮತ್ಯಾರು ಅಲ್ಲ ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಅಭಯ್ ಚಂದ್ರ ಜೈನ್. ಮಂಗಳೂರಿನ ಶಾಸಕ ಐವಾನ್ ಡಿಸೋಜಾ ಮನೆಯಲ್ಲಿ ಉಪಹಾರ ಕೂಟದ ವೇಳೆ ಶಾಸಕ ಅಭಯ್ ಚಂದ್ರ ಜೈನ್ ಸ್ವತಃ ಈ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್'ಗೆ ಅವಕಾಶ ನೀಡಲು ಚುನಾವಣಾ ನಿವೃತ್ತಿ ಘೋಷಿಸಿದ್ದೇನೆ ಎಂದಿದ್ದಾರೆ.
ಮುಲ್ಕಿಯ ಮೂಡಬಿದರಿ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಹಾಗೂ 2 ಬಾರಿ ವಿಧಾನ ಪರಿಷತ್ ಸಸಸ್ಯರಾಗಿ ಆಯ್ಕೆಯಾಗಿದ್ದರು. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ, ಕ್ರೀಡಾ, ಮೀನುಗಾರಿಕೆ ಸಚಿವರಾಗಿದ್ದರು. ಕೆಲವು ತಿಂಗಳ ಹಿಂದಷ್ಟೆ ಇವರನ್ನು ಸಂಪುಟದಿಂದ ಕೈಬಿಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ
ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು