ಮಾಜಿ ಶಾಸಕ ಎಂ.ಪಿ ರವೀಂದ್ರ ಇನ್ನಿಲ್ಲ

Published : Nov 03, 2018, 07:01 AM ISTUpdated : Nov 03, 2018, 07:31 AM IST
ಮಾಜಿ ಶಾಸಕ ಎಂ.ಪಿ ರವೀಂದ್ರ ಇನ್ನಿಲ್ಲ

ಸಾರಾಂಶ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಎಂ.ಪಿ ರವೀಂದ್ರ ಅವರು ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು : ಹರಪನಹಳ್ಳಿ ಮಾಜಿ ಶಾಸಕ ಎಂ.ಪಿ ರವೀಂದ್ರ ಅವರು ತೀವ್ರ ಅನಾರೋಗ್ಯ ದಿಂದ ಶನಿವಾರ ಮುಂಜನೆ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮುಂಜಾನೆ 3.45ಕ್ಕೆ ನಿಧನರಾಗಿದ್ದಾರೆ. 

ಕಳೆದ ಮೂರು ತಿಂಗಳ ಹಿಂದೆ ರವೀಂದ್ರ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು. ಈ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ರವೀಂದ್ರ ಅವರು ಮಾಜಿ ಸಚಿವ ಎಂ.ಪಿ ಪ್ರಕಾಶ್ ಅವರ ಪುತ್ರರಾಗಿದ್ದು 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಸಿ ಜಯಗಳಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!