ಸಂತ್ರಸ್ತರಿಗೆ ನೆರವು ನೀಡಿದ ಮಾಜಿ ಪ್ರಧಾನಿ

Published : Aug 19, 2018, 10:20 PM ISTUpdated : Sep 09, 2018, 10:05 PM IST
ಸಂತ್ರಸ್ತರಿಗೆ ನೆರವು ನೀಡಿದ ಮಾಜಿ ಪ್ರಧಾನಿ

ಸಾರಾಂಶ

ಕೊಡಗು ಹಾಗೂ ಕೇರಳಕ್ಕೆ ತಲಾ ಒಂದು ತಿಂಗಳ ಸಂಬಳ ನೀಡುತ್ತೇನೆ. ಪ್ರವಾಹ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳ ಜತೆಗೆ ಹಣಕಾಸಿನ ನೆರವು ನೀಡಿದರೆ ಅನುಕೂಲವಾಗಲಿದೆ

ಮೈಸೂರು(ಆ.19): ಕೇರಳ ಹಾಗೂ ಕೊಡಗು ನೆರೆ ಸಂತ್ರಸ್ತರಿಗೆ  ನನ್ನ 2 ತಿಂಗಳ ಸಂಬಳ ನೀಡುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಇತಿಹಾಸದಲ್ಲಿ ಇಂತಹ ಮಳೆಯನ್ನು ನೋಡಿಯೇ ಇಲ್ಲ.  ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನನ್ನ ಎರಡು ತಿಂಗಳ ಸಂಬಳ ನೀಡುವುದಾಗಿ ತಿಳಿಸಿದರು.

ಕೊಡಗು ಹಾಗೂ ಕೇರಳಕ್ಕೆ ತಲಾ ಒಂದು ತಿಂಗಳ ಸಂಬಳ ನೀಡುತ್ತೇನೆ. ಪ್ರವಾಹ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳ ಜತೆಗೆ ಹಣಕಾಸಿನ ನೆರವು ನೀಡಿದರೆ ಅನುಕೂಲವಾಗಲಿದೆ. ಮಳೆಯಿಂದ ತತ್ತರಿಸಿರುವ ಜಿಲ್ಲೆಗೆ ಸಹಾಯ ಮಾಡಲು ಎಲ್ಲರೂ ಮುಂದಾಗಬೇಕು. ರಾಜ್ಯದ ಮುಖ್ಯಮಂತ್ರಿಗಳ ನಿಧಿಗೆ ಧನ ಸಹಾಯ ನೀಡಿ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!