ವಿದೇಶಾಂಗ ಸಚಿವ ಜೈಶಂಕರ್‌ ಬಿಜೆಪಿ ಸೇರ್ಪಡೆ, ಗುಜರಾತ್‌ನಿಂದ ಸ್ಪರ್ಧೆ!

Published : Jun 25, 2019, 08:59 AM IST
ವಿದೇಶಾಂಗ ಸಚಿವ ಜೈಶಂಕರ್‌ ಬಿಜೆಪಿ ಸೇರ್ಪಡೆ, ಗುಜರಾತ್‌ನಿಂದ ಸ್ಪರ್ಧೆ!

ಸಾರಾಂಶ

ವಿದೇಶಾಂಗ ಸಚಿವ ಜೈಶಂಕರ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆ| ಮೂಲಗಳ ಪ್ರಕಾರ ಗುಜರಾತ್‌ನಿಂದ ಜೈಶಂಕರ್‌ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಕಳುಹಿಸಲು ಬಿಜೆಪಿ ನಿರ್ಧರಿಸಿದೆ.

ನವದೆಹಲಿ[ಜೂ.25]: ವಿದೇಶಾಂಗ ಖಾತೆ ಸಚಿವ ಎಸ್‌.ಜೈಶಂಕರ್‌ ಸೋಮವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ವಿವಿಧ ದೇಶಗಳಲ್ಲಿ ಭಾರತೀಯ ರಾಯಭಾರಿಯಾಗಿ, ವಿದೇಶಾಂಗ ಇಲಾಖೆ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ್ದ ಜೈಶಂಕರ್‌ ಅವರನ್ನು, ಇತ್ತೀಚೆಗೆ ಕೇಂದ್ರ ಸಚಿವ ಸಂಪುಟಕ್ಕೆ ನೇರವಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಸಂಪುಟ ಸೇರ್ಪಡೆ ವೇಳೆ ಅವರು ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಲಿಲ್ಲ. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಸದ್ಯ ಜೈಶಂಕರ್‌ ಲೋಕಸಭೆ ಅಥವಾ ರಾಜ್ಯಸಭೆ ಸದಸ್ಯರಲ್ಲ. ಹೀಗಾಗಿ ಅವರಿನ್ನು 6 ತಿಂಗಳಲ್ಲಿ ಯಾವುದಾದರೂ ಒಂದು ಸದನದ ಸದಸ್ಯರಾಗಿ ಆಯ್ಕೆಯಾಗುವುದು ಅನಿವಾರ್ಯ. ಮೂಲಗಳ ಪ್ರಕಾರ ಗುಜರಾತ್‌ನಿಂದ ಜೈಶಂಕರ್‌ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಕಳುಹಿಸಲು ಬಿಜೆಪಿ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!