Fact Check: ರಾಹುಲ್‌ ಕಾಲಿಗೆರಗಿದ್ರಾ ಹಿರಿಯ ನಾಯಕ ಮೋತಿಲಾಲ್‌ ವೊರಾ?

By Web DeskFirst Published Jul 13, 2019, 8:54 AM IST
Highlights

ಕಾಂಗ್ರೆಸ್‌ನ ಹಿರಿಯ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮೋತಿಲಾಲ್‌ ವೋರಾ ಕಾಂಗ್ರೆಸ್‌ ನಿರ್ಗಮಿತ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

ಕಾಂಗ್ರೆಸ್‌ನ ಹಿರಿಯ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮೋತಿಲಾಲ್‌ ವೋರಾ ಕಾಂಗ್ರೆಸ್‌ ನಿರ್ಗಮಿತ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವ್ಯಕ್ತಿಯೊಬ್ಬರು ರಾಹುಲ್‌ ಗಾಂಧಿ ಕಾಲಿಗೆರಗಿದಂತೆ ಕಾಣುವ ಫೋಟೋವನ್ನು ಪೋಸ್ಟ್‌ ಮಾಡಿ, ‘ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮೋತಿಲಾಲ್‌ ವೋರಾ (90 ವರ್ಷ) ರಾಹುಲ್‌ ಗಾಂಧಿ ಕಾಲುಮುಟ್ಟಿನಮಸ್ಕರಿಸಿ ಆಶೀರ್ವಾದ ಪಡೆದರು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೂಗುಚ್ಛ ನೀಡಿ ರಾಹುಲ್‌ ಗಾಂಧಿ ಅವರನ್ನು ಬೀಳ್ಕೊಟ್ಟರು’ ಎಂದು ಒಕ್ಕಣೆ ಬರೆಯಲಾಗಿದೆ.

ಬೂಮ್‌ಲೈವ್‌ ಈ ಬಗ್ಗೆ ಪರಿಶೀಲನೆಗೆ ಮುಂದಾದಾಗ ಇದೇ ಚಿತ್ರ 2018ರಲ್ಲೂ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು ಎಂದು ತಿಳಿದುಬಂದಿದೆ. ವಾಸ್ತವವಾಗಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್‌ ಬಾಘೇಲ್‌ ಪ್ರಮಾಣ ವಚನ ಸ್ವೀಕರಿಸುವ ಕಾರ‍್ಯಕ್ರಮದ ಫೋಟೋ ಇದು.

ಫೋಟೋದಲ್ಲಿ ಬಗ್ಗಿರುವ ವ್ಯಕ್ತಿ ಟಿಎಸ್‌ ಸಿಂಗ್‌ ಡಿಯೋ. ಮನಮೋಹನ್‌ ಸಿಂಗ್‌ ಕೈಲಿದ್ದ ಹೂಗುಚ್ಛದ ದಾರ ಕೆಳಗೆ ಬಿದ್ದಿದ್ದರಿಂದ ಅದನ್ನು ಮೇಲೆತ್ತುವ ಸಲುವಾಗಿ ಡಿಯೋ ಕೆಳಗೆ ಬಗ್ಗಿದ್ದರು ಎಂದು ಹಿಂದಿ ಪತ್ರಿಕೆಯೊಂದು ವರದಿ ಮಾಡಿದೆ. ಅಲ್ಲಿಗೆ ಇದೊಂದು ಸುಳ್ಳುಸುದ್ದಿ ಎಂಬುದು ಸ್ಪಷ್ಟ.

- ವೈರಲ್ ಚೆಕ್ 

click me!