ಕ್ರಿಮಿನಲ್‌ ಕೇಸು ಮಾಹಿತಿ ಮುಚ್ಚಿಟ್ಟ ಮಹಾ ಸಿಎಂ ಫಡ್ನವೀಸ್‌ಗೆ ಸಂಕಷ್ಟ!

Published : Oct 02, 2019, 09:02 AM IST
ಕ್ರಿಮಿನಲ್‌ ಕೇಸು ಮಾಹಿತಿ ಮುಚ್ಚಿಟ್ಟ ಮಹಾ ಸಿಎಂ ಫಡ್ನವೀಸ್‌ಗೆ ಸಂಕಷ್ಟ!

ಸಾರಾಂಶ

ಕ್ರಿಮಿನಲ್‌ ಕೇಸು ಮಾಹಿತಿ ಮುಚ್ಚಿಟ್ಟ ಹಾ ಸಿಎಂ ಫಡ್ನವೀಸ್‌ಗೆ ಸಂಕಷ್ಟ| 2014ರ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ತಪ್ಪು ಮಾಹಿತಿ

ನವದೆಹಲಿ[ಅ.02]: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಹೊಸ ಸಂಕಷ್ಟ ಎದುರಾಗಿದೆ.

2014ರ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ತಮ್ಮ ವಿರುದ್ಧ ಬಾಕಿ ಉಳಿದಿದ್ದ ಎರಡು ಕ್ರಿಮಿನಲ್‌ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ವಿಫಲವಾಗಿರುವ ಕಾರಣಕ್ಕೆ ಫಡ್ನವೀಸ್‌ ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂಕೋರ್ಟ್‌ ಮಂಗಳವಾರ ತಿಳಿಸಿದೆ. ಇದೇ ವೇಳೆ ನ್ಯಾ

ರಂಜನ್‌ ಗೊಗೋಯ್‌ ಅವರ ನೇತೃತ್ವದ ಪೀಠ, ಫಡ್ನವಿಸ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ತಳ್ಳಿಹಾಕಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ಹೊರಿಸಿರುವ ಕಾರಣಕ್ಕೆ ಫಡ್ನವೀಸ್‌ ವಿಚಾರಣೆ ಎದುರಿಸಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್‌ ತಿಳಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2700 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದ ಮಣಿಪುರ ಮಿಜೋರಾಂನಲ್ಲಿ ವಾಸಿಸುವ ಇಸ್ರೇಲಿಗರು ಮತ್ತೆ ತವರಿಗೆ
1997ರಲ್ಲಿ ಜನರ ಹೊಸ ವರ್ಷದ ರೆಸಲ್ಯೂಷನ್ ಹೀಗಿತ್ತು: ವೀಡಿಯೋ ಭಾರಿ ವೈರಲ್