ಇಮ್ರಾನ್ ಪ್ರಧಾನಿ ಆದ ನಂತರ ಇಂಡಿಯಾ-ಪಾಕ್ ಕ್ರಿಕೆಟ್ ಪುನಾರಂಭ..!

Published : Aug 02, 2018, 11:49 AM IST
ಇಮ್ರಾನ್ ಪ್ರಧಾನಿ ಆದ ನಂತರ ಇಂಡಿಯಾ-ಪಾಕ್ ಕ್ರಿಕೆಟ್ ಪುನಾರಂಭ..!

ಸಾರಾಂಶ

ಈಗಾಗಲೇ ಇಮ್ರಾನ್ ಖಾನ್ ಅವರು ಪ್ರಧಾನಿ ಮೋದಿ ಜೊತೆ ಮಾತನಾಡಿದ್ದಾರೆ. ಅದರಂತೆ, ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸುವ ದಿನದಂದೇ ಇಸ್ಲಾಮಾಬಾದ್‌ನಲ್ಲಿ ಭಾರತ-ಪಾಕ್ ಫ್ರೆಂಡ್ಲಿ ಮ್ಯಾಚ್ ನಡೆಯಲಿದೆ. ಅಂದು ಮೋದಿ ಹಾಗೂ ಇಮ್ರಾನ್ ಅಕ್ಕ ಪಕ್ಕ ಕುಳಿತು ಪಂದ್ಯ ವೀಕ್ಷಿಸಲಿದ್ದಾರೆ.

ಕರಾಚಿ[ಆ.02]: ಇಸ್ಲಾಮಾಬಾದ್ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಸ್ಪರರ ದೇಶಗಳಲ್ಲಿ ನಿಷೇಧಗೊಂಡಿರುವ ಕ್ರಿಕೆಟ್ ಪಂದ್ಯಗಳು ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನಕ್ಕೆ ಪ್ರಧಾನಿಯಾದ ನಂತರ ಪುನಾರಂಭಗೊಳ್ಳಲಿವೆ. 

ಈ ಕುರಿತು ಈಗಾಗಲೇ ಇಮ್ರಾನ್ ಖಾನ್ ಅವರು ಪ್ರಧಾನಿ ಮೋದಿ ಜೊತೆ ಮಾತನಾಡಿದ್ದಾರೆ. ಅದರಂತೆ, ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸುವ ದಿನದಂದೇ ಇಸ್ಲಾಮಾಬಾದ್‌ನಲ್ಲಿ ಭಾರತ-ಪಾಕ್ ಫ್ರೆಂಡ್ಲಿ ಮ್ಯಾಚ್ ನಡೆಯಲಿದೆ. ಅಂದು ಮೋದಿ ಹಾಗೂ ಇಮ್ರಾನ್ ಅಕ್ಕ ಪಕ್ಕ ಕುಳಿತು ಪಂದ್ಯ ವೀಕ್ಷಿಸಲಿದ್ದಾರೆ. ನಂತರ ಪಾಕ್ ತಂಡ ಭಾರತಕ್ಕೆ ಬಂದು ಆಡಲಿದೆ ಎಂದು ಸುಳ್‌ಸುದ್ದಿ ಮೂಲಗಳು ಹೇಳಿವೆ. 

ಪಾಕಿಸ್ತಾನದ ಉಗ್ರರು ಭಾರತದಲ್ಲಿ ಭಯೋತ್ಪಾದನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆಲ ವರ್ಷಗಳಿಂದ 2 ದೇಶಗಳ ನಡುವೆ ಕ್ರಿಕೆಟ್ ನಿಷೇಧಗೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!