
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾಗಿದ್ದಾರೆ ಎಂಬ ಸುಳ್ಳು ಮಾಹಿತಿ ವಾಟ್ಸಪ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರನ್ನು ಗೊಂದಲಕ್ಕೀಡು ಮಾಡಿವೆ.
93 ವರ್ಷದ ಹಿರಿಯ ನಾಯಕ ಅನಾರೋಗ್ಯದಿಂದ ಬಳಲುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಸ್ಥಿತಿಗತಿಯ ಭಾವಚಿತ್ರಗಳು ಕೂಡ ಎಲ್ಲೂ ಲಭ್ಯವಿಲ್ಲ. ಪ್ರಧಾನಿಯಂಥ ಗಣ್ಯರು ಅವರ ಜನ್ಮದಿನಕ್ಕೆ ಶುಭ ಕೋರಲು ತೆರಳುತ್ತಾರಾದರೂ ಆಗ ಭಾವಚಿತ್ರವೇನೂ ಬಿಡುಗಡೆ ಆಗುವುದಿಲ್ಲ.
2015ರಲ್ಲೂ ವಾಜಪೇಯಿ ಇನ್ನಿಲ್ಲ ಎಂದು ಸುದ್ದಿಗಳು ಹಬ್ಬಿದ್ದವು. ದೇಶದ ಅನೇಕ ಕಡೆ ಈ ಸುಳ್ಳು ಸುದ್ದಿ ನಂಬಿ ಅನೇಕರು ಶ್ರದ್ಧಾಂಜಲಿಯನ್ನೂ ಸಲ್ಲಿಸಿದ್ದರು. ಶ್ರದ್ಧಾಂಜಲಿ ಸಲ್ಲಿಸಿದ್ದಕ್ಕೆ ಕಮಕಲಾಂತ ದಾಸ್ ಎಂಬ ಮುಖ್ಯ ಶಿಕ್ಷಕನನ್ನು ಒಡಿಶಾದಲ್ಲಿ ಅಮಾನತು ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.