
ನವದೆಹಲಿ(ಅ.13): ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಇತ್ತೀಚೆಗೆ ಪುಸ್ತಕವೊಂದನ್ನು ಬರೆದಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್, ಯಾರಿಂದಲೂ ಉಚ್ಛರಿಸಲಾಗದ, ಯಾರಿಂದಲೂ ಅರ್ಥ ಮಾಡಿಕೊಳ್ಳಲಾಗದ 29 ಅಕ್ಷರಗಳ ಶಬ್ದವೊಂದನ್ನು ಪರಿಚಯಿಸಿದ್ದರು.
ಇದೀಗ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಹೊಸ ಪುಸ್ತಕವೊಂದನ್ನು ಬರೆದಿದ್ದಾರೆ. ಅಚ್ಚರಿಯೆಂದರೆ ಇದರಲ್ಲಿ ಬಳಸಿದ ಶಬ್ದಗಳು ಆಕ್ಸ್‌ಫರ್ಡ್ ಡಿಕ್ಷನರಿಯಲ್ಲೂ ಇಲ್ಲ. ತರೂರ್ ಅವರೇ ಹೊಸ ಶಬ್ದಗಳನ್ನು ಹುಟ್ಟುಹಾಕಿದ್ದು, ಈ ಶಬ್ದಗಳ ಬಗ್ಗೆ ಇಂಗ್ಲಿಷ್ ಪಂಡಿತರು ಗಹನವಾದ ಅಧ್ಯಯನದಲ್ಲಿ ತೊಡಗಿದ್ದಾರೆ.
ಅವುಗಳ ಅರ್ಥ ಗೊತ್ತಾಗುವವರೆಗೂ ಪುಸ್ತಕವನ್ನು ಬಿಡುಗಡೆ ಮಾಡುವಂತೆ ಆಕ್ಸ್‌ಫರ್ಡ್ ಸಂಸ್ಥೆ ತರೂರ್ ಅವರಲ್ಲಿ ಮನವಿ ಮಾಡಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.