
ಮಂಗಳೂರು (ಜ.8) : ಕರಾವಳಿಯ ಜನಪ್ರಿಯ ಕಲೆ ಯಕ್ಷಗಾನ ಪ್ರದರ್ಶನವೊಂದರಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸುವಂತೆ ಅನಾಮಧೇಯ ವ್ಯಕ್ತಿಗಳು ಕರೆ ನೀಡಿರುವ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಪ್ರಸಂಗವನ್ನು ಕೂಡಲೇ ನಿಲ್ಲಿಸದಿದ್ದರೆ ಇದರಲ್ಲಿ ಅಭಿನಯಿಸಿದ ಕಲಾವಿದರು ದಾರಿ ಹೆಣವಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಇದೊಂದು ಹಳೆಯ ವಿಡಿಯೋ ಆಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.