
ಬೆಂಗಳೂರು : ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್‌ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ.
ಉಪ ಚುನಾವಣೆಗಳಿಗೆಲ್ಲಾ ಮಹತ್ವ ನೀಡಬೇಕಾದ ಅಗತ್ಯವಿಲ್ಲ. ಬೇಕಿದ್ದರೆ ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ’ ಎಂದು ಸಿದ್ದರಾಮಯ್ಯ ತಮ್ಮದೇ ಧಾಟಿಯಲ್ಲಿ ಹೇಳಿದ್ದಾರೆ.
ಇದೇ ವೇಳೆ ತಮ್ಮನ್ನು ನಿರ್ಲಕ್ಷಿಸಬಾರದು ಎಂಬ ಕಾರಣಕ್ಕೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವುದನ್ನು ಸಿದ್ದರಾಮಯ್ಯ ಮರೆಯಲಿಲ್ಲ ಎಂದು ಸುಳ್‌ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.