
[ಸುಳ್ಳು ಸುದ್ದಿ]
ಬೆಂಗಳೂರು : ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ಫಿಟ್ ಆಗಿರುವ ಸಿದ್ದರಾಮಯ್ಯ ಇನ್ನೇನು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ ಎನ್ನುವಷ್ಟರಲ್ಲೇ ಅಚ್ಚರಿಯ ಬೆಳವಣಿಗೆ ಯೊಂದು ನಡೆದಿದೆ. ಸಿದ್ದರಾಮಯ್ಯ ಅವರಿಗೆ ಒಂದು ತಿಂಗಳು ಹಿಮಾಲಯಕ್ಕೆ ತೆರಳಿ ಧ್ಯಾನ ಮಾಡುವಂತೆ ವೈದ್ಯರು ಹಾಗೂ ಹಿತೈಷಿಗಳು ಸಲಹೆ ನೀಡಿದ್ದಾರೆ.
ಹೀಗಾಗಿ ಸಿದ್ದಾರಾಮಯ್ಯ ರಾಜಕೀಯ ಜಂಜಾಟವನ್ನು ಮರೆತು ಹಿಮಾಲಯದಲ್ಲಿ ಕಾಲ ಕಳೆಯಲು ನಿರ್ಧರಿಸಿದ್ದಾರೆ. ಈ ವೇಳೆ ಯಾವುದೇ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡದಂತೆ ಹಾಗೂ ರಾಜಕೀಯ ವಿಷಯ ಚರ್ಚಿಸದಂತೆಯೂ ಸೂಚಿಸಲಾಗಿದೆ.
ಇದರಿಂದ ಸರ್ಕಾರ ಸದ್ಯದ ಮಟ್ಟಿಗೆ ನಿರಾಳವಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಖರ್ಚುವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಆದರೆ, ಸಿದ್ದರಾಮಯ್ಯ ಅವರು ಇದರಿಂದ ಸಂತುಷ್ಟರಾಗಿಲ್ಲ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.