
ಬೆಂಗಳೂರು : ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಗ್ರಹಣ ದೋಷ ಹುಡುಕಿ ಜನರ ಸಂಕಷ್ಟಗಳನ್ನು ಪರಿಹರಿಸಿದ ಜ್ಯೋತಿಷಿಗಳನ್ನು ಸನ್ಮಾನಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅರ್ಹ ಜ್ಯೋತಿಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
100 ಕ್ಕೂ ಹೆಚ್ಚು ಗ್ರಹಣ ದೋಷ ಹುಡುಕಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದಕ್ಕೆ ಪರಿಹಾರವನ್ನು ಜ್ಯೋತಿಷಿಗಳು ಸೂಚಿಸಬೇ ಕಾಗಿದೆ.
ರಾಜ್ಯದ ಖ್ಯಾತ ಜ್ಯೋತಿಷಿಯೊಬ್ಬರು ರಾಜಕಾರ ಣಿಯೊಬ್ಬರ 150 ಗ್ರಹಣ ದೋಷಗಳನ್ನು ಹುಡುಕಿದ್ದು ಪ್ರಶಸ್ತಿಯ ಫೇವರೇಟ್ ಎನಿಸಿದ್ದಾರೆ. 1000 ಕ್ಕೂ ಹೆಚ್ಚು ಜ್ಯೋತಿಷಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ಪ್ರಶಸ್ತಿ ಪುರಸ್ಕೃತರ ಐವರ ಹೆಸರನ್ನು ಘೋಷಿಸಲಾಗುತ್ತದೆ. ವಿಜೇತರಿಗೆ 10 ಲಕ್ಷ ರು. ಬಹು ಮಾನ ಸಿಗಲಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.