
ಮುಂಬೈ(ಜ.06): ಬಾಲಿವುಡ್'ನ ಖ್ಯಾತ ಹಿರಿಯ ನಟ ಓಂ ಪುರಿ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ನಟ ಓಂ ಪುರಿಗೆ 66 ವರ್ಷ ವಯಸ್ಸಾಗಿತ್ತು. ದುರದೃಷ್ಟವಶಾತ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಂಚಿನ ಕಂಠದ ನಟ ಓಂ ಪುರಿ 1950ರ ಅಕ್ಟೋಬರ್ 18ರಂದು ಹರಿಯಾಣದ ಅಂಬಾಲ ಗ್ರಾಮದಲ್ಲಿ ಜನಿಸಿದ್ದರು. ಈವರೆಗೂ ಸುಮಾರು 120 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಇವರು 5 ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.
ಕನ್ನಡ, ಹಿಂದಿ, ಇಂಗ್ಲೀಷ್ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ನಟಿಸಿದ ಕೀರ್ತಿ ಓಂ ಪುರಿಯವರದ್ದು. ಇವರು ನಟಿಸಿದ್ದ ಎ. ಕೆ. 47 ಎಂಬ ಕನ್ನಡ ಸಿನಿಮಾ ಸಾಕಷ್ಟು ಪ್ರಸಿದ್ಧಿ ಪಡೆದಿತ್ತು. ಓಂ ಪುರಿ ಅವರ ನಿಧನಕ್ಕೆ ಬಾಲಿವುಡ್ ನಿರ್ದೇಶಕರು, ನಟರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.