
ಬೆಂಗಳೂರು[ಸೆ.6] ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ ನಿಮಿತ್ತ 'ಪ್ರಜಾಪ್ರಭುತ್ವದ ಆದರ್ಶವಾದ'ಕ್ಕೆ ನೀಡುವ ಮೊದಲ ಪೆನ್-ಗೌರಿ ಲಂಕೇಶ್ ಪ್ರಶಸ್ತಿಯನ್ನು ಹಿರಿಯ ವ್ಯಂಗ್ಯಚಿತ್ರಕಾರ ಪಿ. ಮುಹಮ್ಮದ್ ಅವರಿಗೆ ನೀಡಿ ಗೌರವಿಸಲಾಗಿದೆ. ಗೌರಿ ಲಂಕೇಶ್ ಅವರ ಸಮಾನತೆ, ನ್ಯಾಯದ ಕುರಿತ ಬದ್ಧತೆ, ನಿರ್ಭೀತತೆಯನ್ನು ಪ್ರಶಸ್ತಿ ಎತ್ತಿ ಹಿಡಿಯುತ್ತದೆ.
ಮೊದಲ ಪ್ರಶಸ್ತಿಗೆ ವ್ಯಂಗ್ಯಚಿತ್ರಕಾರ ಭಾಜನವಾಗಿರುವುದು ಪ್ರಮುಖ ವಿಚಾರ. ಪಿ. ಮುಹಮ್ಮದ್ ಅವರು ತಮ್ಮ ಹೆಚ್ಚಿನ ವ್ಯಂಗ್ಯ ಚಿತ್ರಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ನ್ಯಾಯ ಪ್ರತಿನಿಧಿಸುತ್ತಾ ಬಂದಿದ್ದಾರೆ. ಕನ್ನಡ ವಾರ ಪತ್ರಿಕೆ ತರಂಗ, ಇಂಗ್ಲಿಷ್ ದಿನ ಪತ್ರಿಕೆಗಳಾದ "ದಿ ಗಾರ್ಡಿಯನ್ ಆಫ್ ಬ್ಯುಸಿನಸ್ ಆಯಂಡ್ ಪೊಲಿಟಿಕ್ಸ್", ಆಂಧ್ರಪ್ರದೇಶ ಟೈಮ್ಸ್, ಕನ್ನಡ ದಿನಪತ್ರಿಕೆಗಳಾದ ಮುಂಗಾರು, ಜನವಾಹಿನಿ, ಪ್ರಜಾವಾಣಿ ಹಾಗೂ ವಿಜಯಕರ್ನಾಟಕದಲ್ಲಿ ವ್ಯಂಗ್ಯಚಿತ್ರಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
2017 ರ ಸೆಪ್ಟೆಂಬರ್ 5ರಂದು ದುಷ್ಕರ್ಮಿಗಳು ಗೌರಿ ಲಂಕೇಶ್ ಅವರನ್ನು ಅವರ ಮನೆಯ ಬಳಿಯೇ ಹತ್ಯೆ ಮಾಡಿದ್ದರು. ಗೌರಿ ಲಂಕೇಶ್ ಸಿದ್ಧಾಂತಗಳನ್ನು ನೆನಪಿನಲ್ಲಿ ಇಡಲು ಈ ಪ್ರಶಸ್ತಿ ಕೊಡಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.