ಕೋಟ(ಜು.04): ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ.
ಆ.5ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್‍ಯ ಮಂಗಳವಾರ ಕೋಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.