ಸಾಲಬಾಧೆ : ಬೆಳಗಾವಿಯಲ್ಲಿ ರೈತ ಆತ್ಮಹತ್ಯೆ

First Published May 26, 2018, 3:48 PM IST
Highlights

ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು, ಸಾಲಮನ್ನಾ ಮಾಡಲು ಕಾಲಾವಕಾಶ ಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರಿಂದ ಆತಂಕಗೊಂಡು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ :  ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು, ಸಾಲಮನ್ನಾ ಮಾಡಲು ಕಾಲಾವಕಾಶ ಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರಿಂದ ಆತಂಕಗೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದ  ರೈತ ಬಸಪ್ಪ ವಂಟಗೋಡಿ ಮೃತ ರೈತ. ಇವರು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿಯೂ ಸಾಲ ಮನ್ನಾ ಮಾಡುವ ಭರವಸೆ ನೀಡಲಾಗಿತ್ತು. ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಸಾಬೀತು ಪಡಿಸಿದ ನಂತರ ಸಾಲ ಮನ್ನಾ ಘೋಷಣೆ ಮಾಡುತ್ತಾರೆಂಬ ನಿರೀಕ್ಷೆಯಲ್ಲಿದ್ದರು. ಆದರೆ, ಅದಕ್ಕೆ ಸಮಯ ಬೇಕು ಎಂಬುದನ್ನು ಸದನದಲ್ಲಿ ಹೇಳುತ್ತಿದ್ದಂತೆ, ಮನನೊಂದು ಈ ತೀರ್ಮಾನಕ್ಕೆ ಬಂದಿದ್ದಾರೆನ್ನಲಾಗಿದೆ. 

ಸದನದಲ್ಲಿ ವಿಶ್ವಾಸ ಮತ ಯಾಚನೆ ವೇಳೆ ಕುಮಾರಸ್ವಾಮಿ ಭಾಷಣ ಕೇಳಿದಂದಿನಿಂದ ಆತಂಕಗೊಂಡಿದ್ದ ಬಸಬ್ಪ ಅವರು, ಆತಂಕಗೊಂಡು ನಿನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಕಾಕ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

click me!