ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

Published : Feb 18, 2018, 11:14 PM ISTUpdated : Apr 11, 2018, 12:54 PM IST
ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

ಸಾರಾಂಶ

ರೈತ ನಾಯಕ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ(69) ನಿಧನ

ಮಂಡ್ಯ: ರೈತಸಂಘ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ. ಪುಟ್ಟಣ್ಣಯ್ಯ 1983 ರಿಂದಲೂ ರಾಜ್ಯ ರೈತಸಂಘದೊಂದಿಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಪುಟ್ಟಣ್ಣಯ್ಯ ನಿಧನದಿಂದಾಗಿ ರೈತ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.

 ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬ್ಬಡಿ ಪಂದ್ಯ ವೀಕ್ಷಣೆ ವೇಳೆ  ಎದೆ ನೋವಿನಿಂದ ಪುಟ್ಟಣ್ಣಯ್ಯ ಕುಸಿದು ಬಿದ್ದಿದ್ದಾರೆ.ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಪುಟ್ಟಣ್ಣಯ್ಯ ಮೃತಪಟ್ಟಿದ್ದಾರೆ.

ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಗ್ರಾಮದ ಶ್ರೀಕಂಠೇಗೌಡ-ಶಾರದಮ್ಮ ದಂಪತಿ ಪುತ್ರ.

1994 ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ, ಪುಟ್ಟಣ್ಣಯ್ಯ 2013ರಲ್ಲಿ ಸರ್ವೋದಯ ಪಕ್ಷದಿಂದ ಸ್ಪರ್ಧಿಸಿ 2ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.ರೈತರ ಹಿತಾಸಕ್ತಿ ಕಾಪಾಡಲು,  ಕಾವೇರಿ ನದಿ ನೀರು ವಿಚಾರದಲ್ಲಿ ಪುಟ್ಟಣ್ಣಯ್ಯ ನಿರಂತರ ಹೋರಾಟ ಮಾಡಿದ್ದರು.

ಸ್ವಗ್ರಾಮ ಕ್ಯಾತನಹಳ್ಳಿಗೆ ಆ್ಯಂಬುಲೆನ್ಸ್ ಮೂಲಕ ಪುಟ್ಟಣ್ಣಯ್ಯ ಪಾರ್ಥಿವ ಶರೀರ ರವಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ:

ರೈತನಾಯಕ ಪುಟ್ಠಣ್ಣಯ್ಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ.

ಸಂಸದ ರಾಜೀವ್ ಚಂದ್ರಶೇಖರ್ ಸಂತಾಪ:

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ
ಮುಂದಿನ ಚುನಾವಣೆಗೆ ನಾನು ನಿಲ್ಲದಿದ್ದರೂ ಸರಿ, ಆರ್.ಅಶೋಕ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಸೋಲಿಸಿಯೇ ಸಿದ್ಧ!