
ನವದೆಹಲಿ : ಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಜಯಗಳಿಸಿ ಸರ್ಕಾರ ರಚಿಸುತ್ತಿರುವ ಕಾಂಗ್ರೆಸ್ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೂರು ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಶೀಘ್ರದಲ್ಲೇ ನೀಡಿದ ಆಶ್ವಾಸನೆಯಂತೆ ಸಾಲ ಮನ್ನಾ ಆಗಲಿದೆ ಎಂದಿದ್ದಾರೆ.
ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸಾಲಮನ್ನಾ ಮಾಡುವ ಭರವಸೆ ನೀಡಿತ್ತು. ಚುನಾವಣಾ ರ್ಯಾಲಿಯಲ್ಲಿಯೂ ಸಹ ಈ ಬಗ್ಗೆ ರಾಹುಲ್ ಗಾಂಧಿ ಮತದಾರರಿಗೆ ಆಶ್ವಾಸನೆ ನೀಡಿದ್ದರು.
ಅದರಂತೆ ಇದೀಗ ಮೂರು ರಾಜ್ಯಗಳ ರೈತರ 30 ಸಾವಿರ ಕೋಟಿ ಸಾಲ ಮನ್ನಾ ಆಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದು, ಇಲ್ಲಿಯೂ ಕೂಡ ರೈತರ ಸಾಲಮನ್ನಾ ಆಗಿದ್ದು, ಇದೀಗ ಇನ್ನೂ ಮೂರು ರಾಜ್ಯಗಳಲ್ಲಿ ಸಾಲ ಮನ್ನಾ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.