‘ ಅಥಣಿ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಆಯ್ಕೆ’

Published : Aug 10, 2019, 12:48 PM IST
‘ ಅಥಣಿ  ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಆಯ್ಕೆ’

ಸಾರಾಂಶ

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಇದರ ನಡುವೆಯೇ ಕೈ ನಾಯಕರೋರ್ವರು ದೋಸ್ತಿ ಸರ್ಕಾರದ ಪತನಕ್ಕೆ ಕಾರಣರಾದ ಮುಖಂಡರೋರ್ವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬೆಳಗಾವಿ [ಆ.10]: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿದೆ. ಇದಕ್ಕೆ ಕಾರಣರಾದವರು ಅತೃಪ್ತರಾಗಿ ರಾಜೀನಾಮೆ ನೀಡಿ ತೆರಳಿದವರು ಎಂದು ಕೈ ನಾಯಕರು ಆಕ್ರೋಶ ವ್ಯಕ್ತಡಪಿಸಿದ್ದಾರೆ. 

ಬೆಳಗಾವಿಯ ಅಥಣಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಹೇಶ್ ಕುಮಟಳ್ಳಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದರು. ಇದಕ್ಕೆ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್  ಸೂಕ್ತವಾದ ನ್ಯಾಯಸಮ್ಮತ ತೀರ್ಮಾನವನ್ನೇ ತೆಗೆದುಕೊಂಡರು ಎಂದರು.

ಇನ್ನು ಈ ವಿಚಾರ ಜನತಾ ನ್ಯಾಯಾಲಯದಲ್ಲಿದ್ದು, ಅಲ್ಲಿಯೂ ಕೂಡ ಇದೇ ರೀತಿ ತೀರ್ಪು ಕೂಡ ಬರಲಿದೆ ಎಂದು ಗದಗ ಕ್ಷೇತ್ರದ ಶಾಸಕರಾದ ಎಚ್.ಕೆ.ಪಾಟೀಲ್ ಹೇಳಿದರು. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಮಹೇಶ್ ಕುಮಟಳ್ಳಿ ರಾಜೀನಾಮೆಯಿಂದ ತೆರವಾದ ಅಥಣಿ ಕ್ಷೇತ್ರಕ್ಕೆ ಶೀಘ್ರವೇ ಉಪ ಚುನಾವಣೆ ನಡೆಯಲಿದ್ದು, ಇಲ್ಲಿಗೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುತ್ತವೇ ಎಂದರು. ಇನ್ನು ಕುಮಟಳ್ಳಿ ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ನಾನು ಇದುವರೆಗೂ ಅವರನ್ನು ಭೇಟಿ ಮಾಡಿಲ್ಲವೆಂದು ಸ್ಪಷ್ಟನೆ ನೀಡಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ