
ಮಂಡ್ಯ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆ ಘೋಷಣೆಗೂ ಮುನ್ನವೇ ರೈತರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿದ ರೈತರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ರವಾನೆಯಾಗಿದೆ.
ಮದ್ದೂರು ತಾಲ್ಲೂಕಿನ ಕಡೇ ಭಾಗಕ್ಕೆ ವ್ಯವಸಾಯಕ್ಕೆ ನೀರು ಹರಿಸದ ಹಿನ್ನೆಲೆಯಲ್ಲಿ ಅಜ್ಜಹಳ್ಳಿ, ಮಾರ್ಗೇನಹಳ್ಳಿ, ಉಪ್ಪಾರದೊಡ್ಡಿ ಗ್ರಾಮಸ್ಥರು ಸಚಿವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಭಾಗದ ಜಮೀನಿಗೆ ವ್ಯವಸಾಯಕ್ಕೆ ನೀರಿಲ್ಲ. ಹೀಗಿರುವಾಗ ನಮಗೆ ಚುನಾವಣೆ ಯಾಕೆ ಬೇಕು. ಮತ ಪೆಟ್ಟಿಗೆ ನಮ್ಮ ಊರಿಗೆ ಬರಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.