
ಮುಂಬೈ (ಮೇ.04) : ಕೆಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೊಜನೆಯಾಗಿರುವ ಬುಲೆಟ್ ಟ್ರೈನ್ ಹಾಗೂ ಎಕ್ಸ್‌ಪ್ರೆಸ್ ವೇ ಯೋಜನೆಗೆ ಆರಂಭಿಕ ವಿಘ್ನ ಎದುರಾಗಿದೆ.
ಯೋಜನೆಗೆ ಸಾವಿರಾರು ಎಕರೆ ಕೃಷಿ ಭೂಮಿ ಹಾಗೂ ಮನೆ-ಮಠಗಳನ್ನು ಸ್ವಾಧೀನ ಪಡಿಸುವುದನ್ನು ವಿರೋಧಿಸಿ, ಮಹಾರಾಷ್ಟ್ರದ ಥಾನೆ- ಪಾಲ್ಘಾರ್ ಜಿಲ್ಲೆಯ ಸುಮಾರು 50 ಸಾವಿರ ರೈತರು ಗುರುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಆ ಯೋಜನೆಗಳಿಂದ ಆದಿವಾಸಿಗಳಿಗೆ, ಗ್ರಾಮಸ್ಥರಿಗೆ ಮತ್ತು ಕೃಷಿಕರಿಗೆ ಯಾವುದೇ ಪ್ರಯೋಜನವಿಲ್ಲ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲವೆಂದು ರೈತರು ಎಚ್ಚರಿಸಿದ್ದಾರೆ.
ಮುಂಬೈ- ಅಹಮದಾಬಾದ್ ಬುಲೆಟ್ ಟ್ರೈನ್ ಹಾಗೂ ಮುಂಬೈ- ವಡೋದರಾ ಎಕ್ಸ್‌ಪ್ರೆಸ್ ವೇ ಯೋಜನೆಗಳು ಖಾಸಗೀಕರಣದ ಪ್ರಯತ್ನವಾಗಿದೆಯೆಂದು, ಪ್ರತಿಭಟನೆಯಲ್ಲಿ ಸೇರಿದ್ದ ಸುಮಾರು 60 ಗ್ರಾಮಗಳ ರೈತರು ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಮುಂದಿನ ಪಾಲ್ಘಾರ್ ಉಪ-ಚುನಾವಣೆಯಲ್ಲಿ ಬಿಜೆಪಿಯುನ್ನು ಸೋಲಿಸುವುದಾಗಿ ಎಚ್ಚರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.