
ಥಾಣೆ: ಮಧ್ಯಪ್ರದೇಶದ ಬಳಿಕ ಈಗ ಮಹಾರಾಷ್ಟ್ರದ ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಮಾನ ನಿಲ್ದಾಣ ನಿರ್ಮಿಸಲು ರಕ್ಷಣಾ ಇಲಾಖೆಯು ನೆವಲಿ ಗ್ರಾಮದಲ್ಲಿ 1600 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದರ ವಿರುದ್ಧ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಥಾಣೆ –ಬದ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದೆ. ರೈತರ ಕೋಪಕ್ಕೆ ಮೂರು ಪೊಲೀಸ್ ವಾಹನಗಳು ಬೆಂಕಿಗಾಹುತಿಯಾಗಿದ್ದರೆ, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ತುಕಡಿಗಳನ್ನು ಕರೆಸಲಾಗಿದೆ.
ಕಳೆದ ಜೂ.1 ರಿಂದ 11ರವರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದಾದ್ಯಂತ ರೈತರು ಪ್ರತಿಭಟನೆಗಳನ್ನು ನಡೆಸಿದ್ದರು.
ಚಿತ್ರ:ಏಎನ್'ಐ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.