
ಶ್ರೀನಗರ(ಆ.22): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ, ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ವಿರುದ್ಧ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ.
ಶ್ರೀನಗರದ ಹಜ್ರತ್ಬಾಲ್ ಮಸೀದಿಯಲ್ಲಿ ಈದ್ ಅಂಗವಾಗಿ ನಡೆದ ಪ್ರಾರ್ಥನೆ ವೇಳೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಮೇಲೆ ಉದ್ರಿಕ್ತರ ಗುಂಪೊಂದು ಹಲ್ಲೆಗೆ ಯತ್ನಿಸಿದೆ. ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಆಕ್ರೋಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಾರೂಖ್ ಅಬ್ದುಲ್ಲಾ, ದೇಶ ಬದಲಾವಣೆಯಾಗಬೇಕಿದೆ, ನಾನು ಶಾಂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ತಲುಪಿಸಲು ಬಯಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಶಾಂತಿಯನ್ನು ಕದಡಲು, ವಿರೋಧಿಸುವುದಕ್ಕಾಗಿಯೇ ಕೆಲವರು ಇದ್ದಾರೆ, ಆದರೆ ನಾವು ಶಾಂತಿ ಸೌಹಾರ್ದತೆಗಾಗಿ ಪ್ರಯತ್ನಿಸುತ್ತಲೇ ಇರಬೇಕಾಗುತ್ತದೆ, ನನ್ನ ರಾಜ್ಯದ ಜನತೆ ಇನ್ನೂ ಎಷ್ಟು ಸಮಸ್ಯೆಗಳನ್ನು ಎದುರಿಸಬೇಕು? ಇಡೀ ದೇಶವೇ ಅಭಿವೃದ್ಧಿ ಕಾಣುತ್ತಿರುವಾಗ ನಾವೂ ಅದರ ಜೊತೆ ಹೆಜ್ಜೆ ಹಾಕಬೇಕಾಗುತ್ತದೆ ಎಂದು ಅಬ್ದುಲ್ಲಾ ಭಾವನಾತ್ಮಕವಾಗಿ ಹೇಳಿದ್ದಾರೆ.
ಇತ್ತೀಚೆಗೆ ನವದೆಹಲಿಯಲ್ಲಿ ನಡೆದಿದ್ದ ಮಾಜಿ ಪ್ರಧನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ಸರ್ವ ಪಕ್ಷಗಳ ಶ್ರದ್ಧಾಂಜಲಿ ಸಭೆಯಲ್ಲಿ ಫಾರೂಖ್ ಅಬ್ದುಲ್ಲಾ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.