
ಬೆಳಗಾವಿ(ಡಿ.13): ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ವೃತ್ತಿಯಲ್ಲಿ ಯೋಧನಾಗಿರುವ ಮಗನ ಮೇಲೆಯೇ ತಂದೆ ಫೈರಿಂಗ್ ಮಾಡಿದ್ದಾನೆ.
ಈರಣ್ಣ ವಿಠಲ ಇಂಡಿ (೨೧) ಎಂಬವರೇ ತಂದೆಯ ಗುಂಡಿಗೆ ಬಲಿಯಾಗಿರುವ ಯೋಧ. ಮೃತಪಟ್ಟ ಯೋಧ ಬೆಂಗಳೂರಿನ ಎಂಇಸಿ ಸೆಂಟರ್'ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಈರಣ್ಣನ ತಂದೆ ವಿಠಲ ಇಂಡಿ (೬೮) ಎಂಬಾವರೇ ಯೋಧನನ್ನು ಹತ್ಯೆ ಮಾಡಿದ್ದಾರೆ.
ಈರಣ್ಣ ನಿನ್ನೆ ಕರ್ತವ್ಯದಿಂದ ಮನೆಗೆ ಬಂದಿದ್ದ. ಈ ವೇಳೆ ಹಣದ ವಿಚಾರಕ್ಕಾಗಿ ತಂದೆ ಮಗನ ಮಧ್ಯೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಹೀಗಾಗಿ ತಂದೆ ವಿಠಲ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಆಗ ಯೋಧ ಈರಣ್ಣ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಅನುಸೂಯಾ (೪೦) ಸಹೋದರಿ ಪ್ರೀತಿ (೧೯) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.