
ತುಮಕೂರು (ಫೆ.11): 'ಮನೆ ಮನೆಗೆ ಕುಮಾರಣ್ಣ' ಕಾರ್ಯಕ್ರಮದಲ್ಲಿ ಎಂ.ಟಿ.ಕೃಷ್ಣಪ್ಪ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ.
ತುರುವೇಕೆರೆ ತಾಲೂಕಿನ ಅಮ್ಮಸಂದ್ರದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಎಂ.ಟಿ.ಕೃಷ್ಣಪ್ಪ ಬೆಂಬಲಿಗರು, ಗ್ರಾಮಸ್ಥರ ನಡುವೆ ಜಟಾಪಟಿ ನಡೆದಿದೆ. ಕಾರ್ಯಕ್ರಮದ ವೇಳೆ ಗ್ರಾಮಸ್ಥರು ಸರಿಯಾಗಿ ಕೆಲಸ ಮಾಡಿಲ್ಲವೆಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕೃಷ್ಣಪ್ಪ ಬೆಂಬಲಿಗರು ಕೆಲ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಟೆಗಳ ಕಾಲ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.