
ಮೈಸೂರು (ಮೇ.16): ವಿಶ್ವವಿಖ್ಯಾತ ಮೈಸೂರು ಅರಮನೆ ಆವರಣದಲ್ಲಿ ಚಿತ್ರತಂಡವೊಂದು ಅನುಮತಿ ಇಲ್ಲದೆ ಡ್ರೋನ್ ಕ್ಯಾಮರಾ ಬಳಕೆ ಮಾಡಿದೆ.
ರಾಜರಾಣಿ ಚಲನಚಿತ್ರದ ಚಿತ್ರೀಕರಣ ವೇಳೆ ಡ್ರೋನ್ ಕ್ಯಾಮರಾ ಬಳಕೆ ಮಾಡಲಾಗಿದ್ದು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಡ್ರೋನ್ ಕ್ಯಾಮರಾ ಹಾರಾಟ ನಡೆಸಿದೆ.
ಅದನ್ನು ಗಮನಿಸಿದ ಪ್ರವಾಸಿಗರು ಮೈಸೂರಿನ ದೇವರಾಜ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ಯಾಮರಾ ವಶಕ್ಕೆ ಪಡೆಯಲು ಹೋದಾಗ ಚಿತ್ರತಂಡದವರು ಕ್ಯಾಮರಾ ಸಹಿತ ಪರಾರಿಯಾಗಿದ್ದಾರೆ.
ಕೋಟೆ ಆಂಜನೇಯ ದೇವಸ್ಥಾನದ ಎದುರು ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಿಕರಣಕ್ಕೆ ಅನುಮತಿ ಪಡೆದಿದ್ದರೂ ಡ್ರೋನ್ ಕ್ಯಾಮರಾವನ್ನು ಬಳಸುವಂತಿಲ್ಲ. ಪೊಲೀಸರು ಶೂಟಿಂಗ್ ಸ್ಥಳದಲ್ಲಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.