
ಬೆಂಗಳೂರು(ಸೆ.03): ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಂತಿಮ ಸುತ್ತಿನ ಮಹತ್ವದ ಸಭೆ ಇಂದು ನಡೆಯಲಿದೆ. ಸಚಿವ ಸುರೇಶ್ ಕುಮಾರ್ ಅವರು ಅಂತಿಮ ಸುತ್ತಿನ ಸಭೆ ಕರೆದಿದ್ದು,ಇದರಲ್ಲಿ ವರ್ಗಾವಣೆಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ವರ್ಗಾವಣೆ ವಿಚಾರದಲ್ಲಿ ಇರುವ ಗೊಂದಲ ಪರಿಹಾರವಾಗದೇ ಇದ್ದಲ್ಲಿ ಹೋರಟಾಗಳೂ ನಡೆಯುವ ಸಾಧ್ಯತೆ ಇದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ವಿಚಾರವಾಗಿ ಸಭೆ ಕರೆದಿರುವ ಸಚಿವ ಸುರೇಶ್ ಕುಮಾರ್ ವರ್ಗಾವಣೆ ಸಂಬಂಧ ಮಹತ್ವದ ತೀರ್ಮಾನ ಕೖಗೊಳ್ಳಿದ್ದಾರೆ. ಸಭೆಯಲ್ಲಿ ಪ್ರಮುಖ ಅಧಿಕಾರಿಗಳೂ, ಸಚಿವರು ಹಾಗೂ ಕೆಲವು ಶಿಕ್ಷಕರು ಭಾಗಿಯಾಗಲಿದ್ದಾರೆ. ವಿಕಾಸಸೌಧದಲ್ಲಿ ಶಿಕ್ಷಕರ ವರ್ಗಾವಣೆ ವಿಚಾರವಾಗಿ ಸಭೆ ನಡೆಯಲಿದೆ.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರು
ದಶಕಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ‘ಎ’ ವಲಯದಿಂದ ‘ಸಿ’ ವಲಯಕ್ಕೆ ಕಡ್ಡಾಯವಾಗಿ ವರ್ಗಾವಣೆ ಮಾಡಬೇಕಿದೆ. ಆದರೆ, ಈಗಾಗಲೇ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಶಿಕ್ಷಕರು, ಹೇಗಾದರೂ ಮಾಡಿ ವರ್ಗಾವಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಶತಾಯಗತಾಯ ಪ್ರಯತ್ನ ನಡೆಯುತ್ತಿದ್ದಾರೆ. ಕಳೆದ ವಾರ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಒಂದು ವೇಳೆ ಶಿಕ್ಷಕರ ವರ್ಗಾವಣೆ ವಿಚಾರ ಬಗೆಹರಿಯದೇ ಹೋದ್ರೆ ಶಿಕ್ಷಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆಯೂ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.