ಬಿಎಸ್'ವೈ ವಿರುದ್ಧ ಎಫ್'ಐಆರ್ ದಾಖಲು; ಯಾವುದೇ ಕ್ಷಣದಲ್ಲೂ ಬಂಧನ ಸಾಧ್ಯತೆ?

Published : Aug 17, 2017, 09:29 PM ISTUpdated : Apr 11, 2018, 12:45 PM IST
ಬಿಎಸ್'ವೈ ವಿರುದ್ಧ ಎಫ್'ಐಆರ್ ದಾಖಲು; ಯಾವುದೇ ಕ್ಷಣದಲ್ಲೂ ಬಂಧನ ಸಾಧ್ಯತೆ?

ಸಾರಾಂಶ

ಯಡಿಯೂರಪ್ಪ ಸಿಎಂ ಆಗಿದ್ದಾಗ, ಹೆಸರುಘಟ್ಟ-ಯಲಹಂಕ ವ್ಯಾಪ್ತಿಯ 17 ಗ್ರಾಮಗಳಲ್ಲಿ ಒಟ್ಟು 3546 ಎಕರೆ ಜಮೀನನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಸುಮಾರು 19 ಸಾವಿರ ನಿವೇಶನಗಳ ಬೃಹತ್ ಶಿವರಾಮ್ ಕಾರಂತ್ ಬಡಾವಣೆ ನಿರ್ಮಾಣಕ್ಕಾಗಿ ಭೂಸ್ವಾಧೀನವಾಗಿತ್ತು. ಇದರಲ್ಲಿ ಯಡಿಯೂರಪ್ಪನವರು ಸುಮಾರು 257 ಎಕರೆ ಜಮೀನನ್ನು ಡೀನೋಟಿಫೈ ಮಾಡಿಸಿದ್ದರೆನ್ನಲಾಗಿದೆ. ಆದರೆ, ಈ ವಿಚಾರದಲ್ಲಿ ಸುಮಾರು 250 ಎಕರೆಯಷ್ಟು ಜಮೀನಿನ ಡೀನೋಟಿಫಿಕೇಶನ್'ನಲ್ಲಿ ಸರಿಯಾದ ನಿಯಮಗಳನ್ನು ಪಾಲಿಸಲಾಗಿಲ್ಲ. ಅಂದರೆ ಅಕ್ರಮವಾಗಿ ಡೀನೋಟಿಫಿಕೇಶನ್ ಮಾಡಲಾಗಿದೆ ಎಂದು ಅಯ್ಯಪ್ಪ ದುರೈ ಆರೋಪಿಸಿದ್ದಾರೆ.

ಬೆಂಗಳೂರು(ಆ. 17): ಡಿಕೆ ಶಿವಕುಮಾರ್ ಮೇಲೆ ಐಟಿ ರೇಡ್ ಆಯ್ತು, ಅಮಿತ್ ಶಾ ಆಗಮಿಸಿ ಸಿದ್ದರಾಮಯ್ಯ ಸರಕಾರವನ್ನು ಅತ್ಯಂತ ಭ್ರಷ್ಟ ಎಂದು ಬಣ್ಣಸಿ ಹೋಗಿದ್ದಾಯ್ತು.. ಈಗ ಪ್ರತ್ಯಸ್ತ್ರ ಬಿಡುವುದು ಕಾಂಗ್ರೆಸ್ ಸರದಿ ಇದ್ದ ಹಾಗಿದೆ. ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಎರಡು ಎಫ್ಐಆರ್'ಗಳು ದಾಖಲಾಗಿವೆ. ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಈಗ ಮರುಜೀವ ಸಿಕ್ಕಿದೆ. ಡಾ. ಡಿ. ಅಯ್ಯಪ್ಪ ದುರೈ ಎಂಬ ಸಾಮಾಜಿಕ ಹೋರಾಟಗಾರರೊಬ್ಬರು ಬಿಎಸ್'ವೈ ವಿರುದ್ಧ ಅಕ್ರಮ ಡೀನೋಟಿಫಿಕೇಶ್ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಲ್ಲಿ ಅವರು ಎಫ್'ಐಆರ್ ದಾಖಲಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ, ಹೆಸರುಘಟ್ಟ-ಯಲಹಂಕ ವ್ಯಾಪ್ತಿಯ 17 ಗ್ರಾಮಗಳಲ್ಲಿ ಒಟ್ಟು 3546 ಎಕರೆ ಜಮೀನನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಸುಮಾರು 19 ಸಾವಿರ ನಿವೇಶನಗಳ ಬೃಹತ್ ಶಿವರಾಮ್ ಕಾರಂತ್ ಬಡಾವಣೆ ನಿರ್ಮಾಣಕ್ಕಾಗಿ ಭೂಸ್ವಾಧೀನವಾಗಿತ್ತು. ಇದರಲ್ಲಿ ಯಡಿಯೂರಪ್ಪನವರು ಸುಮಾರು 257 ಎಕರೆ ಜಮೀನನ್ನು ಡೀನೋಟಿಫೈ ಮಾಡಿಸಿದ್ದರೆನ್ನಲಾಗಿದೆ. ಆದರೆ, ಈ ವಿಚಾರದಲ್ಲಿ ಸುಮಾರು 250 ಎಕರೆಯಷ್ಟು ಜಮೀನಿನ ಡೀನೋಟಿಫಿಕೇಶನ್'ನಲ್ಲಿ ಸರಿಯಾದ ನಿಯಮಗಳನ್ನು ಪಾಲಿಸಲಾಗಿಲ್ಲ. ಅಂದರೆ ಅಕ್ರಮವಾಗಿ ಡೀನೋಟಿಫಿಕೇಶನ್ ಮಾಡಲಾಗಿದೆ ಎಂದು ಅಯ್ಯಪ್ಪ ದುರೈ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌