ಸುಳ್ಳು ಟ್ವೀಟ್ ಮಾಡಿದ ಶಾಸಕ ಜಿಗ್ನೇಶ್ ವಿರುದ್ಧ ಪ್ರಕರಣ ದಾಖಲು!

Published : Jun 16, 2019, 08:55 AM IST
ಸುಳ್ಳು ಟ್ವೀಟ್ ಮಾಡಿದ ಶಾಸಕ ಜಿಗ್ನೇಶ್ ವಿರುದ್ಧ ಪ್ರಕರಣ ದಾಖಲು!

ಸಾರಾಂಶ

ನಕಲಿ ವಿಡಿಯೋವೊಂದನ್ನು ಟ್ವೀಟ್| ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲು

ಅಹಮದಾಬಾದ್[ಜೂ.16]: ನಕಲಿ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿದೆ

ಅರೆಬೆತ್ತಲೆ ಸ್ಥಿತಿ ಯಲ್ಲಿದ್ದ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಯಾರೋ ಒಬ್ಬ ವ್ಯಕ್ತಿ ಥಳಿಸುತ್ತಿರುವ ವಿಡಿಯೋವೊಂದನ್ನು ಮೇ 20ರಂದು ಮೇವಾನಿ ಟ್ವೀಟರ್‌ನಲ್ಲಿ ಶೇರ್ ಮಾಡಿದ್ದರು. ವಲ್ಸಾದ್ ಮೂಲದ ಆರ್‌ಎಂವಿಎಂ ಶಾಲೆಯ ಶಿಕ್ಷಕ ಈತ ಎಂದು ಬರೆದಿದ್ದರು.

ಆದರೆ ಆ ವಿಡಿಯೋ ತಮ್ಮ ಶಾಲೆಯದ್ದಲ್ಲ ಎಂದು ಶಾಲಾ ಪ್ರಾಂಶುಪಾಲರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇವಾನಿ ವಿರುದ್ಧ ಐಪಿಸಿ ಸೆಕ್ಷನ್ 505(2), 500 ಅಡಿ ಪ್ರಕರಣ ದಾಖಲಿಸಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದಿನ ಜಾತಕ: ಮೇಷ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆಯ ಚಿಹ್ನೆಗಳು, ಕರ್ಕ ರಾಶಿಯವರಿಗೆ ಪರಿಹಾರ ಸಿಗುತ್ತದೆ
ಕಬ್ಬು ಬೆಳೆಗಾರರಿಗೆ ಗುಡ್‌ನ್ಯೂಸ್: ರೈತರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ!