
ಮುಂಬೈ(ಜೂ.13): ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಾಸವಿರುವ ಅಪಾರ್ಟಮೆಂಟ್‌ನಲ್ಲಿ ಬೆಂಕಿ ಅವಘಢ ಸಂಭವಿಸಿದೆ. ಇಲ್ಲಿನ ವರ್ಲಿಯ 33 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬಿವುಮಾಂಡೆ ಕಟ್ಟಡದ ಬಿ ವಿಭಾಗದ ಕೊನೆಯ ಎರಡು ಅಂತಸ್ತಿಗಳಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಮುಗಿಲೆತ್ತರಕ್ಕೆ ರಾಚಿದೆ. ಇದೇ ಕಟ್ಟಡದ 26ನೇ ಅಂತಸ್ತಿನಲ್ಲಿ ದೀಪಿಕಾ ಪಡುಕೋಣೆ ವಾಸಿಸುತ್ತಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇನ್ನು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟವು. ಆದರೆ, ಬೆಂಕಿ ಅವಘಡದಿಂದಾಗಿ ಕಟ್ಟಡದ ಅವಶೇಷಗಳಡಿ ಕೆಲವರು ಸಿಲುಕಿಕೊಂಡಿರುವ ಶಂಕೆ ಇದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇನ್ನು ಬೆಂಕಿ ಅವಘಢದಲ್ಲಿ ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.