
ವಡೋದರಾ[ಸೆ.1] ಭಾರತದ 75ನೇ ಸ್ವಾತಂತ್ರ್ಯೋತ್ಸವದ ದ್ಯೋತಕವಾಗಿ 2022ರ ಆ.15ರಂದು ಮೊದಲ ಬುಲೆಟ್ ರೈಲನ್ನು ಓಡಿಸಲು ಮೋದಿ ಸರ್ಕಾರ ಬಯಸಿದೆ. 50 ಕಿ.ಮೀ. ಉದ್ದದ ಈ ಮಾರ್ಗವನ್ನು ಬುಲೆಟ್ ರೈಲು ಕೇವಲ 15 ನಿಮಿಷಗಳಲ್ಲಿ ಕ್ರಮಿಸಲಿದೆ.
ನೇರವಾದ ಮಾರ್ಗ ಮತ್ತು ನಿರ್ಮಾಣದ ದೃಷ್ಟಿಯಿಂದ ಒಂದು ವರ್ಷ ಮುನ್ನವೇ ಬುಲೆಟ್ ರೈಲು ಓಡಿಸಲು ಸಾಧ್ಯವಿದೆ ಎಂದು ರಾಷ್ಟ್ರೀಯ ಹೈಸ್ಪೀಡ್ ರೈಲ್ವೆ ಕಾರ್ಪೊರೇಷನ್ ತಿಳಿಸಿದೆ. 508 ಕಿ.ಮೀ. ಉದ್ದದ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ರೈಲು ಮಾರ್ಗ 2023ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಹಳಿ ಬಿರುಕು ಪತ್ತೆ ವ್ಯವಸ್ಥೆ: ಇದೇ ವೇಳೆ ಮುಂಬೈ- ಅಹಮದಾಬಾದ್ ಬುಲೆಟ್ ರೈಲು ಮಾರ್ಗದ ಹಳಿಯಲ್ಲಿ ಬಿರುಕು ಉಂಟಾಗಿದ್ದರೆ ಅದನ್ನು ಸ್ವಯಂಚಾಲಿತವಾಗಿ ಪತ್ತೆಹಚ್ಚುವ ವ್ಯವಸ್ಥೆಯನ್ನು ಅಳವಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಲ್ಲದೇ ಅತ್ಯಾಧುನಿಕ ಬೆಂಕಿ ಅನಾಹುತ ಪತ್ತೆ ವ್ಯವಸ್ಥೆ ಮತ್ತು ಹಳಿತಪ್ಪದಂತೆ ತಡೆಯುವ ಕ್ರಮಗಳನ್ನು ಪರಿಚಯಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.