ನೂತನ ಶಾಸಕರಿಗೆ ಯೋಗಿ ಆದಿತ್ಯನಾಥ್ ಖಡಕ್ ಸೂಚನೆ

By Suvarna Web DeskFirst Published Mar 20, 2017, 9:50 AM IST
Highlights

ಉತ್ತರ ಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಯೋಗಿ ಆದಿತ್ಯನಾಥ್ ಭ್ರಷ್ಟಾಚಾರವನ್ನು ಮಟ್ಟ ಹಾಕಲು ದಿಟ್ಟ ಕ್ರಮ ಕೈಗೊಂಡಿದ್ದಾರೆ. ನೂತನ ಶಾಸಕರಿಗೆ ತಮ್ಮ ಸ್ಥಿರಾಸ್ತಿ-ಚರಾಸ್ಥಿ ಆದಾಯದ ವಿವರಗಳನ್ನು 15 ದಿನಗಳೊಳಗೆ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿಯವರ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ನವದೆಹಲಿ (ಮಾ.20): ಉತ್ತರ ಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಯೋಗಿ ಆದಿತ್ಯನಾಥ್ ಭ್ರಷ್ಟಾಚಾರವನ್ನು ಮಟ್ಟ ಹಾಕಲು ದಿಟ್ಟ ಕ್ರಮ ಕೈಗೊಂಡಿದ್ದಾರೆ. ನೂತನ ಶಾಸಕರಿಗೆ ತಮ್ಮ ಸ್ಥಿರಾಸ್ತಿ-ಚರಾಸ್ಥಿ ಆದಾಯದ ವಿವರಗಳನ್ನು 15 ದಿನಗಳೊಳಗೆ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿಯವರ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ಭ್ರಷ್ಟಾಚಾರವನ್ನು ಹೋಗಲಾಡಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಲೋಕ ಭವನದಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ ಲೋಕ ಕಲ್ಯಾಣ ಸಂಕಲ್ಪ ಪತ್ರ ಭರವಸೆಯನ್ನು ತಮ್ಮ ಸರ್ಕಾರ ಈಡೇರುಸುವುದಾಗಿ ಹೇಳಿದರು.

ಉತ್ತರ ಪ್ರದೇಶ ಅಭಿವೃದ್ದಿಗೆ ಅಗತ್ಯ ಕ್ಮ ಕೈಗೊಳ್ಳುತ್ತೇವೆ. ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಬೇರೂರಿರುವ ಭ್ರಷ್ಟಾಚಾರ, ಸ್ವಜನಪಕ್ಷಪಾತದಿಂದ ಬಿಡುಗಡೆಗೊಳಿಸಲು ಶ್ರಮಿಸುತ್ತೇವೆ.  ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಅದನ್ನು ಅಭಿವೃದ್ದಿಪಡಿಸಲು ಶೀಘ್ರದಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

click me!