
ಬೆಂಗಳೂರು(ಆ.07) ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಒಂದು ವಾರ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಲ್ಕ ಪಾವತಿಗೆ ಇಂದು ಅಂದರೆ ಆಗಸ್ಟ್ 7 ಕೊನೆಯ ದಿನವಾಗಿತ್ತು.ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವುದರಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ.
ಪ್ರವಾಹದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಯುವಕ! ಬಚಾವ್ ಮಾಡಿದ ಊರ ಮಂದಿ
ಸಿಇಟಿ 3ನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸಲು ಇಂದು ಕೊನೆಯ ದಿನಾಂಕ. ಉತ್ತರ ಕರ್ನಾಟಕದಲ್ಲಿ ಮಳೆಯಿಂದ ತತ್ತರಿಸಿರುವ ಜನ ಗುಳೆ ಎದ್ದಿದ್ದಾರೆ. ಮುಂದಿನ 15 ದಿನಗಳಾದರೂ ಅವರಿಗೆ ಈ ದಿನಾಂಕಗಳನ್ನು ವಿಸ್ತರಿಸಲಿಲ್ಲವೆಂದರೆ ಗಾಯದ ಮೇಲೆ ಬರೆ ಎಳೆದಂತೆ. ನಿರ್ಣಯ ಆದಷ್ಟು ಬೇಗ ಆಗಬೇಕಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.