
ನವದೆಹಲಿ(ಡಿ.12): ಪ್ರಧಾನಿ ನರೇಂದ್ರ ಮೋದಿ ಮೊಬೈಲ್ ಮೂಲಕ ಉತ್ತರ ಪ್ರದೇಶದ ಬಹರೈಚ್''ನಲ್ಲಿ ನಡೆದ 'ಪರಿವರ್ತನ್ ರ್ಯಾಲಿ'ಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಪ್ರಧಾನಿ ಮೊದಿ ನಿನ್ನೆ ಬಹರೈಚ್'ಗೆ ಆಗಮಿಸಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ದಟ್ಟ ಮಂಜಿನಿಂದಾಗಿ ಅವರ ಹೆಲಿಕಾಪ್ಟರ್ ಬಹರೈಚ್'ನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ರ್ಯಾಲಿಯನ್ನು ರದ್ದುಗೊಳಿಸುವ ಬದಲು ಮೊಬೈಲ್ ಮೂಲಕವೇ ಪರಿವರ್ತನ್ ರ್ಯಾಲಿ ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಗೂಂಡಾ ರಾಜ್ ಇದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದರಿಂದ ಜನ ಬೇಸತ್ತು ಹೋಗಿದ್ದಾರೆ. ಪೊಲೀಸರಿಂದಲೂ ಈ ಗೂಂಡಾಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ನೀವು ಮುಕ್ತಿ ಪಡೆಯಬೇಕಾದರೆ ಗೂಂಡಾಗಳನ್ನು ಬೆಂಬಲಿಸುತ್ತಿರುವವರನ್ನು ತಿರಸ್ಕರಿಸಿ, ಬಿಜೆಪಿಗೆ ಬೆಂಬಲಿಸಿ ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.