ಪಡಿತರ ವಿತರಣೆಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಸಿಎಂ ಒಪ್ಪಿಗೆ

Published : Jun 21, 2019, 08:38 AM ISTUpdated : Jun 21, 2019, 08:58 AM IST
ಪಡಿತರ ವಿತರಣೆಗೆ  ಹೆಚ್ಚಿನ ಅನುದಾನ ಬಿಡುಗಡೆಗೆ ಸಿಎಂ ಒಪ್ಪಿಗೆ

ಸಾರಾಂಶ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹೆಚ್ಚಿನ ಅನುದಾನ ಬಿಡುಗಡೆಯ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ. 

ಬೆಂಗಳೂರು [ಜೂ.21] : ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಬೇಕಾದ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ವಿತರಣಾ ವ್ಯವಸ್ಥೆಯಡಿ ಅಗತ್ಯ ಇರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಮುಕ್ತ ಮಾರುಕಟ್ಟೆಯಿಂದ ತೊಗರಿಬೇಳೆ ಖರೀದಿಸಲು ಇ-ಪ್ರೊಕ್ಯೂರ್‌ಪೋರ್ಟಲ್‌ ಮೂಲಕ ಇ-ಟೆಂಡರ್‌ಗೆ ಸರ್ಕಾರ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದರು.

ಇದೇ ವೇಳೆ ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರು. ಒದಗಿಸಲಾಗಿದೆ ಎಂದು ಜಮೀರ್‌ ಅಹಮದ್‌ ಖಾನ್‌ ಸಭೆಯ ಗಮನಕ್ಕೆ ತಂದರು. ಬಜೆಟ್‌ನಲ್ಲಿ ಘೋಷಿಸಿರುವಂತೆ ಇಲಾಖೆಯು ಕಾರ್ಯನಿರ್ವಹಿಸುತ್ತಿರುವ ಬಗ್ಗೆಯೂ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಆರ್ಥಿಕ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು