
ನವದೆಹಲಿ(ಜು.09): ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಆಚರಣೆ ವೇಳೆ ಎಲ್ಲಾ ಬಿಜೆಪಿ ಸಂಸದರೂ ತಮ್ಮ ತಮ್ಮ ಕ್ಷೇತ್ರದಲ್ಲಿ 150 ಕಿ.ಮೀ ಪಾದಯಾತ್ರೆ ಮಾಡಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.
ಇಂದು ದೆಹಲಿಯಲ್ಲಿ ಬಿಜೆಪಿ ಸಂಸದರೊಂದಿಗಿನ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಕ್ಟೋಬರ್ 2ರಿಂದ ಅಕ್ಟೋಬರ್ 31ರ ನಡುವೆ ಬಿಜೆಪಿ ಸಂಸದರು ಪ್ರತಿದಿನ 15 ಕಿ.ಮೀ ನಂತೆ ಒಟ್ಟು 150 ಕಿ.ಮೀ. ಪಾದಯಾತ್ರೆ ನಡೆಸುವ ಮೂಲಕ ಮಹಾತ್ಮಾ ಗಾಂಧಿ ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಕರೆ ನೀಡಿದರು.
ಈ ಕುರಿತು ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿ ಬಿಜೆಪಿ ಸಂಘಟನಾತ್ಮಕವಾಗಿ ದುರ್ಬಲವಾಗಿರುವ ಕ್ಷೇತ್ರಗಳಲ್ಲಿ ಸಂಚರಿಸಬೇಕೆಂದು ಪ್ರಧಾನಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.