
ಮೈಸೂರು(ಫೆ.21): ಪ್ರವಾಸೋದ್ಯಮವೇ ಜೀವಾಳವಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜರ್ಮನ್ ಪ್ರವಾಸಿ ಮಹಿಳೆ ಮೇಲೆ ಕೀಚಕನೊಬ್ಬ ನಡೆಸಿದ ಅಟ್ಟಹಾಸದಿಂದ ವಿದೇಶ ಪ್ರವಾಸಿಗರಿಗೆ ರಕ್ಷಣೆ ಇಲ್ಲವೇ ಎನ್ನುವಂತಾಗಿದೆ.
ಸೋಮವಾರ ರಾತ್ರಿ 7.15ರ ಸುಮಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ಮೆಟ್ಟಿಲು ಮಾರ್ಗವಾಗಿ ಕೆಳಗಿಳಿದು ಬರುತ್ತಿದ್ದ 27 ವರ್ಷದ ಜರ್ಮನ್ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಲೈಂಗಿಕ ಕಿರುಕುಳ ನೀಡಿ ಹಣ ದೋಚಿ ಪರಾರಿಯಾಗಿದ್ದಾನೆ.ರಾಕ್ಷಸನಿಂದ ಪಾರಾಗಿ ಬಂದಿರುವ ಜರ್ಮನ್ ಮಹಿಳೆ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಲ್ಲೆಯಿಂದ ನೊಂದಿರುವ ಮಹಿಳೆಯನ್ನು ನಗರದ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ. ಮೂರು ತಿಂಗಳ ಭಾರತ ಪ್ರವಾಸಕ್ಕಾಗಿ ಬಂದಿರುವ ಈ ಮಹಿಳೆ ಮೈಸೂರು ಸುತ್ತಮುತ್ತಲಿನ ಪ್ರವಾಸ ಕೈಗೊಂಡಿದ್ದರು.ಚಾಮುಂಡಿಬೆಟ್ಟದ ಮೆಟ್ಟಿಲುಗಳಲ್ಲಿ ಸಂಜೆ ವೇಳೆ ಸರಿಯಾದ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ಜಿಲ್ಲಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ಇಲ್ಲಿಗೆ ಬರುವ ವಿದೇಶಿ ಪ್ರವಾಸಿಗರಿಗೆ ಭದ್ರತೆ ಕಲ್ಪಿಸಬೇಕಿದೆ.
ಹಲ್ಲೆಯಿಂದ ನೊಂದಿರುವ ಮಹಿಳೆಯನ್ನು ನಗರದ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ. ಮೂರು ತಿಂಗಳ ಭಾರತ ಪ್ರವಾಸಕ್ಕಾಗಿ ಬಂದಿರುವ ಈ ಮಹಿಳೆ ಮೈಸೂರು ಸುತ್ತಮುತ್ತಲಿನ ಪ್ರವಾಸ ಕೈಗೊಂಡಿದ್ದರು.
ಚಾಮುಂಡಿಬೆಟ್ಟದ ಮೆಟ್ಟಿಲುಗಳಲ್ಲಿ ಸಂಜೆ ವೇಳೆ ಸರಿಯಾದ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ಜಿಲ್ಲಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ಇಲ್ಲಿಗೆ ಬರುವ ವಿದೇಶಿ ಪ್ರವಾಸಿಗರಿಗೆ ಭದ್ರತೆ ಕಲ್ಪಿಸಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.