
ನವದೆಹಲಿ, [ಜೂ.23]: ನರೇಂದ್ರ ಮೋದಿ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವ ಎಸ್. ಜೈಶಂಕರ್ ಅವರು ಬಿಜೆಪಿ ಅವರು ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಇಂದು [ಸೋಮವಾರ] ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಅವರು ಬಿಜೆಪಿ ಸೇರಿದರು.
ಜೈಶಂಕರ್ ಅವರು ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಂಸತ್ ಗೆ ಆಯ್ಕೆಯಾಗದೇ ನೇರವಾಗಿ ಸಚಿವರಾಗಿರುವ ಜೈಶಂಕರ್, 6 ತಿಂಗಳಲ್ಲೇ ಸಂಸತ್ ಸದಸ್ಯರಾಗಬೇಕಿದೆ. ಇದರಿಂದ ಅವರು ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
2015ರಿಂದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.ಅವರ ಅನುಭವದ ಆಧಾರದ ಮೇಲೆ ವಿದೇಶಾಂಗ ವ್ಯವಹಾರಗಳ ಖಾತೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.