
ಬೆಂಗಳೂರು(ಅ.28): ಬೆಂಗಳೂರಲ್ಲಿ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕಾರಿನಲ್ಲಿ ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತೆಯನ್ನು ಕರೆದೊಯ್ದು ವಿದೇಶಿ ಪ್ರಜೆಗಳು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿದ್ದ ಅಪ್ಘಾನಿಸ್ತಾನ ಮೂಲದ ಮುಜತಾಬ್ ಜಲಾಲ್, ಇರಾಕ್ನ ಕರಮ್ ಅಬ್ದುಲ್ ಅಹಮದ್ ಬಂಧಿಸಲಾಗಿದೆ.
ಕುಡಿದ ಅಮಲಿನಲ್ಲಿದ್ದ ವಿದೇಶಿ ಪ್ರಜೆಗಳು ಸಂಜೆ ವೇಳೆ ಸ್ನೇಹಿತೆ ಮನೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದರು. ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಇಬ್ಬರು ಆರೋಪಿಗಳನ್ನ ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಪೊಕ್ಸೊ ಕಾಯ್ದೆ, ಐಪಿಸಿ ಸೆಕ್ಷನ್ 376, ಐಪಿಸಿ 506ರ ಅಡಿ ಕೆ.ಆರ್ ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.