
ನವದೆಹಲಿ(ಜು.15): ಇತ್ತೀಚೆಗೆ ಚುನಾವಣಾ ಆಯೋಗ ವಿದ್ಯುನ್ಮಾನ ಮತಯಂತ್ರವನ್ನು ತಿರುಚಿ ತೋರಿಸು ವಂತೆ ರಾಜಕೀಯ ಪಕ್ಷಗಳಿಗೆ ಸವಾಲು ಹಾಕಿ ಗೆದ್ದ ಬೆನ್ನಲ್ಲೇ, ವಿಧಿವಿಜ್ಞಾನ ಪರೀಕ್ಷೆಯಲ್ಲೂ ಇವಿಎಂ ದುರ್ಬಳಕೆ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ. 2014ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ವೇಳೆ, ಪರ್ವಟ್ಟಿ ಕ್ಷೇತ್ರಕ್ಕೆ ಬಳಸಿದ ಮತಯಂತ್ರಗಳನ್ನು ತಿರುಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಇವಿಎಂಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವಂತೆ ಆದೇಶಿಸಿತ್ತು.
ಹೈದರಾಬಾದ್‌ನ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಇವಿಎಂಗಳನ್ನು ಪರೀಕ್ಷೆಗೆ ಗುರಿಪಡಿಸಲು ಸೂಚಿಸಿತ್ತು. ಇವಿಎಂನ ಕಂಟ್ರೋಲ್ ಯುನಿಟ್ ಮತ್ತು ಎರಡು ಬ್ಯಾಟರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಇವಿಎಂಗಳನ್ನು ಕಂಪ್ಯೂಟರ್‌ನಿಂದ ನಿಯಂತ್ರಿಸುವುದು ಅಥವಾ ಯಾವುದೇ ನೆಟ್‌ವರ್ಕ್‌ನೊಂದಿಗೂ ಬೆಸೆಯುವುದು ಸಾಧ್ಯವಿಲ್ಲ. ಅವುಗಳನ್ನು ತಿರುಚಿರುವ ಬಗ್ಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಪ್ರಯೋಗಾಲಯದ ವರದಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.