
ಚಾಮರಾಜನಗರ: ಕಾಡಾನೆ ಕೊಂದು ಅಪಹರಿಸಲಾಗಿದ್ದ ಆನೆ ದಂತಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಮಲೆಮಹದೇಶ್ವರಬೆಟ್ಟ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದಲ್ಲಿ ಆನೆಯೊಂದನ್ನು ಕೊಂದು ಅದರ ಎರಡು ದಂತಗಳನ್ನು ಅಪಹರಿಸಲಾಗಿತ್ತು.
ಕೊಳ್ಳೇಗಾಲ ತಾಲ್ಲೂಕಿನ ಸೂಳೆಕೋಬೆ ಗ್ರಾಮದ ಸಣ್ ಪುಟ್ಟ (40) ಎಂಬಾತ ಈ ಕೃತ್ಯ ಎಸಗಿರುವ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರಕಿತ್ತು.
ಈ ಹಿನ್ನಲೆಯಲ್ಲಿ ಸಣ್ ಪುಟ್ಟನ ಮನೆ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಆತನ ಮನೆಯಲ್ಲಿ ಅಡಗಿಸಿಟ್ಟಿದ್ದ ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.