
ಬಾಗಲಕೋಟೆ[ಜು.4] ರಾಜ್ಯ ಸರಕಾರದ ಮೇಲೆ ತಮ್ಮದೇ ಧಾಟಿಯಲ್ಲಿ ಒತ್ತಡ ಹೇರುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಸಮರ ಮುಂದುವರಿಸಿದ್ದಾರೆ. ಬಾದಾಮಿಯಲ್ಲಿ ಕೈಗಾರಿಕಾ ಸಂಸ್ಥೆ ಹಾಗೂ ಪ್ರವಾಸಿಗರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಬಾದಾಮಿಯ ಹಾಲಿ ಶಾಸಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಬೃಹತ್ ಕೈಗಾರಿಕಾ ಕೆ.ಜೆ. ಜಾರ್ಜ್ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಬಾದಾಮಿ, ಕೆರೂರ, ಗುಳೇದಗುಡ್ಡ, ಪಟ್ಟಣಗಳಲ್ಲಿ ಬೃಹತ್ ಕೈಗಾರಿಕೆ ಸ್ಥಾಪಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಐತಿಹಾಸಿಕ ಬಾದಾಮಿ, ಬನಶಂಕರಿ, ಮಹಾಕೂಟದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಪ್ರವಾಸೋದ್ಯಮ ಸಚಿವರಿಗೂ ಪತ್ರ ರವಾನೆಯಾಗಿದೆ.
ಚಾಮುಂಡೇಶ್ವರಿ ಮತ್ತು ಬದಾಮಿ ಎರಡು ಕಡೆಯಿಂದ ಸ್ಪರ್ಧೆ ಮಾಡಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋಲು ಕಂಡಿದ್ದರು. ಬದಾಮಿ ಶಾಸಕರಾಗಿ ಸಿದ್ದರಾಮಯ್ಯ ವಿಧಾನಸಭೆ ಪ್ರತಿನಿಧಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.