ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಸಹೋದರ ನಿಧನ

Published : Jun 22, 2019, 10:27 AM ISTUpdated : Jun 22, 2019, 11:39 AM IST
ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಸಹೋದರ ನಿಧನ

ಸಾರಾಂಶ

ಎಸ್‌.ಎಂ.ಶಂಕರ್ ವಿಧಿವಶ| ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸಹೋದರ ಹಾಗೂ ಮಾಜಿ‌ ವಿಧಾನ ಪರಿಷತ್ ಸದಸ್ಯ ಎಸ್. ಎಂ ಶಂಕರ್| ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಂಕರ್ ನಿಧನ| 

ಮಂಡ್ಯ[ಜೂ.22]: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ‌ ವಿಧಾನ ಪರಿಷತ್ ಸದಸ್ಯ ಎಸ್‌. ಎಂ. ಶಂಕರ್ ವಿಧಿವಶರಾಗಿದ್ದಾರೆ. 

ಸುಮಾರು 83 ವರ್ಷ ವಯಸ್ಸಿನ ಶಂಕರ್, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸಹೋದರ ಹಾಗೂ ಮಾಜಿ‌ ವಿಧಾನ ಪರಿಷತ್ ಸದಸ್ಯರು. ಎಸ್. ಎಂ. ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ[1989-94] ಶಂಕರ್ ಮಂಡ್ಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್ ಪ್ರವೇಶಿಸಿದ್ದರು. 

ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್‌. ಎಂ. ಶಂಕರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ, ಸೋಮನಹಳ್ಳಿಯಲ್ಲಿ ಇಂದು ಶನಿವಾರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?