ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಪ್ರಭಾವಿ ಮಹಿಳೆ..ಬದಲಾಗುತ್ತಾ ಚಿತ್ರಣ?

By Web DeskFirst Published Jan 10, 2019, 9:50 PM IST
Highlights

ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ಮೇಜರ್ ಸರ್ಜರಿಗೆ ಮುಂದಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಚಿಂತನೆ ಮಾಡಿದ್ದು ಒಂದು ಕಾಲದಲ್ಲಿ ಪ್ರಭಾವಿ ಎನಿಸಿಕೊಂಡಿದ್ದ  ಮಹಿಳೆಗೆ ಮತ್ತೆ ಕಾಂಗ್ರೆಸ್ ಜವಾಬ್ದಾರಿ ನೀಡಿದೆ.

ನವದೆಹಲಿ(ಜ.10)  ಅಜಯ್ ಮಕೇನ್ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಸ್ಥಾನಕ್ಕೆ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್  ಅವರನ್ನು ಕರೆತರಲಾಗಿದೆ.

ಅಧಿಕೃತ ಮಾಹಿತಿ ಇನ್ನು ಹೊರಬರಬೇಕಿದೆ.  ರಾಜ್ಯ ಕಾಂಗ್ರೆಸ್​ ಅಧ್ಯಕ್ಷರಾಗಿ ನಿಮ್ಮನ್ನು ನೇಮಕ ಮಾಡಲಾಗುತ್ತಿದೆ. ಇದರಿಂದ ಮತ್ತೆ ನೀವು ರಾಜ್ಯ ರಾಜಕಾರಣದಲ್ಲಿ ಪಾತ್ರ ವಹಿಸಲಿದ್ದು ಪಕ್ಷವನ್ನು ಹೊಸ ದಿಕ್ಕಿನೆಡೆಗೆ ಕರೆದುಕೊಂಡಿ ಹೋಗುತ್ತೀರಿ ಎಂದು ಅಜಯ್ ಮಕೇನ್ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಮೋದಿ ವಿರುದ್ಧ ಗುಡುಗಿದ ರಾಹುಲ್‌ಗೆ ಮಹಿಳಾ ಆಯೋಗದ ನೋಟಿಸ್!

ರಾಹುಲ್ ಗಾಂಧಿಯವರೇ ಖುದ್ದು ಮುಂದೆ ನಿಂತು ಶೀಲಾ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ಇಂಥ ಕ್ರಮಕ್ಕೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.

शीला दीक्षित जी को पुन: प्रदेश कांग्रेस अध्यक्ष बनने पर बधाई व शुभकामनाएँ!

उनके आधीन,मुझे संसदीय सचिव एवं कैबिनेट मंत्री के रूप में काम करके सीखने का सुअवसर मिला!

मुझे विश्वास है कि शीला जी की अगुआई में हम,मोदी+केजरीवाल सरकारों के विरोध में एक सशक्त विपक्ष की भूमिका निभाएँगे! pic.twitter.com/lFxuG2ScRE

— Ajay Maken (@ajaymaken)
click me!