ಜನಾರ್ದನ ರೆಡ್ಡಿ ಜೈಲಿಗೆ: ಸಿದ್ದರಾಮಯ್ಯ ಏನಂದ್ರು?

By Web Desk  |  First Published Nov 11, 2018, 5:10 PM IST

ಅಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ. 


ಚಿಕ್ಕಮಗಳೂರು, [ನ.11]: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆಗುತ್ತಿದ್ದಂತೆ  ಪ್ರತಿಕ್ರಿಯಿಸಿದ ಅವರು, ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ತಾರೆ. 

Tap to resize

Latest Videos

ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲೇ ಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನ್ಯಾಯಾಲಯ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿದೆ ಎಂದರು. 

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ, ವಿಧಾನಸಭೆ ಉಪಚುನಾವಣೆ ವೇಳೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಸಿದ್ದರಾಮಯ್ಯ ಅವರು ಮಾಡಿದ ತಪ್ಪಿನಿಂದಾಗಿ ಅವರ ಮಗ ಸತ್ತರು. ದೇವರು ಅವರಿಗೆ ಕೊಟ್ಟ ಶಿಕ್ಷೆ ಅದು ಅಂತಾ ಹೇಳಿದ್ದರು.

 ಜನಾರ್ದನ ರೆಡ್ಡಿ ಅವರ ಈ ಹೇಳಿಕೆಗೆ ಸಿದ್ದರಾಮಯ್ಯ ಅವರು ಭಾವನಾತ್ಮಕವಾಗಿಯೇ ಟ್ವೀಟ್ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದರು. ಇನ್ನು ರೆಡ್ಡಿ ಅಸಂಬದ್ಧ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಯ್ತು. 

click me!