
ಬಾದಾಮಿ: ಇತ್ತ ವಿಧಾನಸೌಧದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಶೇಷ ಕೊಠಡಿ ಸಿದ್ಧವಾಗುತ್ತಿದೆ. ಆದರೆ ಇದೀಗ ಸ್ವಕ್ಷೇತ್ರವಾಗಿರುವ ಬಾದಾಮಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಸಭೆ ನಡೆಸಿ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಮೊದಲ ಸಭೆಯಲ್ಲೆ ಅಧಿಕಾರಿಗಳ ಚಳಿ ಬಿಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾಹಿತಿ ಕೊರತೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಿದ್ದಾರಾಮಯ್ಯ ನೇತೃತ್ವದಲ್ಲಿ ಬಾದಾಮಿಯ ತಾಲೂಕು ಪಂಚಾಯತಿ ಆವರಣದಲ್ಲಿ ನಡೆದ ನಡೆದ ಸಭೆಯಲ್ಲಿ ಮಾಜಿ ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಅಧಿಕಾರಿಗಳ ಬಳಿ ಮಾಹಿತಿ ಕೊರೆತೆಯಿದ್ದು ಮುಂದಿನ ಒಂದು ತಿಂಗಳೊಳಗೆ ಎಲ್ಲವೂ ಸರಿ ಇರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.